ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್: ಬೆಂಗಳೂರು ತಂಡಕ್ಕೆ 218ರನ್ ಗುರಿ ನೀಡಿದ ರಾಜಸ್ಥಾನ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಾಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಬೌಲಿಂಗ್ ಆಯ್ಕೆ ಮಾಡಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದರು.
ಆದರೆ ವಿರಾಟ್ ಕೊಹ್ಲಿ ಲೆಕ್ಕಾಚಾರ ತಲೆಕೆಳಗೆ ಮಾಡಿದ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿರುವ ಕೇರಳದ ಯುವ ಆಟಗಾರ ಸಂಜು ಸ್ಯಾಮ್ಸನ್ 45 ಎಸೆತಗಳಲ್ಲಿ 10 ಸಿಕ್ಸರ್ ನೆರವಿನಿಂದ ಅಜೇಯ 92 ರನ್ ಗಳಿಸಿ ತಂಡದ ಮೊತ್ತವನ್ನು 217ಕ್ಕೆ ಏರಿಸಿ 20 ಓವರ್ಗಳಲ್ಲಿ ಬೆಂಗಳೂರು ತಂಡಕ್ಕೆ 218ರನ್ ಗುರಿ ನೀಡಿದರು.