ಅಂಬೇಡ್ಕರ್ ಪ್ರತಿಮೆಗಳ ಧ್ವಂಸದ ಹಿಂದೆ ಕ್ರಿಶ್ಚಿಯನ್ ಮಿಷನರಿಗಳ ಕೈವಾಡವಿದೆ ಎಂದ ಬಿಜೆಪಿ ಸಂಸದ!

ನ್ಯೂಸ್ ಕನ್ನಡ ವರದಿ-(16.04.18): ಯೋಗಿ ಆದಿತ್ಯನಾಥ್ ಆಡಳಿತ ನಡೆಸುತ್ತಿರುವ ಉತ್ತರಪ್ರದೇಶದಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ರವರ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗುತ್ತಿದೆ. ಮೊನ್ನೆ ತಾನೇ ಅಂಬೇಡ್ಕರ್ ಪ್ರತಿಮೆಯೊಂದನ್ನು ಧ್ವಂಸ ಮಾಡಲಾಗಿತ್ತು. ಬಳಿಕ ಕಬ್ಬಿಣದ ಬೇಲಿಗಳನ್ನು ಮಾಡುವ ಮೂಲಕ ಪ್ರತಿಮೆಗೆ ರಕ್ಷಣೆ ನೀಡಲಾಗಿತ್ತು. ಈ ನಡುವೆ ಯೋಗಿ ಆದಿತ್ಯನಾಥ್ ಗೆ ಅಂಬೇಡ್ಕರ್ ಮಹಾಸಭಾ ದಲಿತಮಿತ್ರ ಎಂಬ ಬಿರುದು ನೀಡಿತ್ತು. ಇದೀಗ ಈ ಕುರಿತು ಮಾತನಾಡಿದ ಬಿಜೆಪಿ ಸಂಸದ, ಅಂಬೇಡ್ಕರ್ ಪ್ರತಿಮೆಗಳ ಧ್ವಂಸದ ಹಿಂದೆ ಕ್ರಿಶ್ಚಿಯನ್ ಮಿಷನರಿಗಳ ಕೈವಾಡವಿದೆ ಎಂದು ಹೇಳಿದ್ದಾರೆ.

ಶನಿವಾರದಂದು ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಉತ್ತರಪ್ರದೇಶದ ಬಲಿಯಾ ಕ್ಷೇತ್ರದ ಬಿಜೆಪಿ ಸಂಸದ ಭರತ್ ಸಿಂಗ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಅಂಬೇಡ್ಕರ್ ಪ್ರತಿಮೆ ಧ್ವಂಸ ಪ್ರಕರಣದ ಹಿಂದೆ ಕ್ರಿಶ್ಚಿಯನ್ ಮಿಶನರಿಗಳ ಕೈವಾಡವಿದೆ. ಪ್ರತಿಮೆಗಳನ್ನು ಧ್ವಂಸ ಮಾಡಿದರೆ ಮಿಶನರಿಗಳಿಗೆ ಹಣ ನೀಡಲಾಗುತ್ತಿದೆ. ಅಲ್ಲದೇ ಈ ಮಿಶನರಿಗಳು ಹಿಂದೂಗಳಿಗೆ ಹಣದ ಆಮಿಷವೊಡ್ಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *