ಸಿದ್ಧರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧೆ: ಎರಡು ಕ್ಷೇತ್ರಗಳಿಂದ ಸ್ಪರ್ಧಿಸಲು ಯಾರಿಗೂ ಅವಕಾಶ ನೀಡದ ಹೈಕಮಾಂಡ್!
ನ್ಯೂಸ್ ಕನ್ನಡ ವರದಿ(16-04-2018): ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿನ ಭೀತಿಯನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳಿಗೆ ಕಾಂಗ್ರೆಸ್ ಹೈಕಮಾಂಡ್ ತೆರೆ ಎಳೆದಿದೆ. ಯಾರೋಬ್ಬರಿಗೂ ಎರಡೆರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಪಕ್ಷವು ಅವಕಾಶ ನೀಡಲಿಲ್ವ.
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಸೋಲುವ ಸಾಧ್ಯತೆಯಿದೆ ಎಂದು ರಾಜ್ಯ ಗುಪ್ತಚರ ವರದಿಗಳು ತಿಳಿಸಿದ ಹಿನ್ನಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದೊಂದಿಗೆ ವರುಣಾ ಅಥವಾ ಬಾದಾಮಿ ಕ್ಷೇತ್ರದಿಂದ ಸಿಎಂ ಸ್ಪರ್ಧಿಸಲಿದ್ದಾರೆಂಬ ಮಾತು ಕೇಳಿಬರುತ್ತಿತ್ತು. ಇದೀಗ ವರುಣಾ ಹಾಗೂ ಬಾದಾಮಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ವು ಅಧಿಕೃತವಾಗಿ ಘೋಷಿಸುವ ಮೂಲಕ ಹೈಕಮಾಂಡ್ ಸಂಶಯಗಳಿಗೆ ಬ್ರೇಕ್ ಹಾಕಿದೆ.
ವಕುಣಾ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಪುತ್ರ ಯತೀಂದ್ರ ಸ್ಪರ್ಧಿಸಿದರೆ, ಬಾದಾಮಿ ಕ್ಷೇತ್ರದಿಂದ ದೇವರಾಜ್ ಪಾಟೇಲ್ ಅವರು ಸ್ಪರ್ಧಿಸಲಿದ್ದಾರೆ.