ದೇಶದ ಪ್ರತಿಯೊಬ್ಬ ಪ್ರಜೆಯನ್ನು ಗೌರವಿಸದ ಹೊರತು ನಾವು ದೇಶಭಕ್ತರಾಗಲು ಸಾಧ್ಯವಿಲ್ಲ: ವೆಂಕಯ್ಯ ನಾಯ್ಡು

ನ್ಯೂಸ್ ಕನ್ನಡ ವರದಿ(16-04-2018): ನಾವು ಎಲ್ಲಿಯವರೆಗೆ ದೇಶದ ಪ್ರತಿಯೊಬ್ಬ ಪ್ರಜೆಯನ್ವು ಗೌರವಿಸುವುದಿಲ್ಲವೋ ಅಲ್ಲಿಯ ತನಕ ನಾವು ದೇಶ ಭಕ್ತರಾಗಲು ಸಾಧ್ಯವಿಲ್ಲ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಭಿಪ್ರಾಯಪಟ್ಟಿದ್ದಾರೆ.

ದೇಶದಲ್ಲಿ ಅನೇಕ ಶಕ್ತಿಗಳು ತಮ್ಮ ರಾಜಕೀಯ ಲಾಭಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದೆ. ಈ ದೇಶದಲ್ಲಿರುವ ಪ್ರತಿಯೊಂದು ಜೀವಿಗೂ ಕೂಡ ಭೂಮಿಯ ಮೇಲೆ ಜೀವಿಸುವ ಹಕ್ಕಿದೆ. ಈ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ಗೌರವಿಸದ ಹೊರತು ನಮ್ಮನ್ನು ನಾವು ದೇಶಭಕ್ತರೆಂದು ಕರೆದು ಪ್ರಯೋಜನವಿಲ್ಲ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

Leave a Reply

Your email address will not be published. Required fields are marked *