ಮಕ್ಕಾ ಮಸೀದಿ ಸ್ಫೋಟ ಪ್ರಕರಣದ ತೀರ್ಪು ನೀಡಿದ ಎನ್’ಐಎ ನ್ಯಾಯಾಧೀಶ ರಾಜೀನಾಮೆ!

ನ್ಯೂಸ್ ಕನ್ನಡ ವರದಿ-(16.04.18): ಇಂದು ಮಧ್ಯಾಹ್ನ ಹೈದರಾಬಾದ್ ನ ಮಕ್ಕಾ ಮಸೀದಿ ಸ್ಫೋಟ ಪ್ರಕರಣದ ಕುರಿತಾದಂತೆ ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯವು ಇಂದು ತೀರ್ಪು ನೀಡಿತ್ತು. ತೀರ್ಪಿನಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಉಲ್ಲೇಖಿಸಿ ಎಲ್ಲಾ ಆರೋಪಿಗಳನ್ನೂ ಖುಲಾಸೆ ಮಾಡಲಾಗಿತ್ತು. ಇದೀಗ ದಿಢೀರ್ ಬೆಳವಣಿಗೆಯಲ್ಲಿ ಈ ಪ್ರಕರಣದ ತೀರ್ಪು ನೀಡಿದ ರಾಷ್ಟ್ರೀಯ ತನಿಖಾದಳದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಇದೀಗ ರಾಜೀನಾಮೆ ಸಲ್ಲಿಸಿದ್ದಾರೆಂದು ತಿಳಿದು ಬಂದಿದೆ.

2007ರ ಮೇ 18ರಂದು ಹೈದರಾಬಾದ್ ನ ಮಕ್ಕಾ ಮಸೀದಿಯಲ್ಲಿ ಶುಕ್ರವಾರದ ನಮಾಝ್ ನಡೆಯುತ್ತಿದ್ದ ವೇಳೆ ಬಾಂಬ್ ಸ್ಫೋಟ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಸಿಬಿಐ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಮತ್ತು ಭಯೋತ್ಪಾದನಾ ಕೃತ್ಯಗಳನ್ನು ಮಾಡುತ್ತಿರುವ ಅಭಿನವ ಭಾರತ ಎಂಬ ಸಂಘಟನೆಗೆ ಸೇರಿದ 10 ಮಂದಿಯನ್ನು ಬಂಧಿಸಿದ್ದರು. ಈ ಪ್ರಕರಣದಲ್ಲಿ ಮಾತ್ರವಲ್ಲದೇ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಸೀಮಾನಂದನನ್ನು ಕೂಡಾ ಖುಲಾಸೆಗೊಳಿಸಲಾಗಿದೆ. ಆದರೆ ಇದೀಗ ನ್ಯಾಯಾಧೀಶ ಸ್ಥಾನಕ್ಕೆ ವೈಯಕ್ತಿ ತೊಂದರೆಯ ಸಬೂಬು ನೀಡಿ ರಾಜೀನಾಮೆ ನೀಡಿದ ರವೀದ್ರನಾಥ್ ರೆಡ್ಡಿಯವರ ನಡೆಯು ನಿಗೂಢತೆಯನ್ನು ಸೃಷ್ಟಿಸಿದೆ.

Leave a Reply

Your email address will not be published. Required fields are marked *