ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧ ಬೃಹತ್ ಮೊತ್ತ ದಾಖಲಿಸಿದ ಕೆಕೆಆರ್
ನ್ಯೂಸ್ ಕನ್ನಡ ವರದಿ-(16.04.18): ಇಂಡಿಯನ್ ಪ್ರೀಮಿಯರ್ ಲೀಗ್ ನ 13ನೇ ಪಂದ್ಯಾಟವು ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡಿಲ್ಲಿ ಡೇರ್ ಡೆವಿಲ್ಸ್ ನಡುವೆ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇಂದು ನಡೆದ ಪಂದ್ಯಾಟದಲ್ಲಿ ನಿತೀಶ್ ರಾಣಾ ಹಾಗೂ ಕೆರಿಬಿಯನ್ ಆಟಗಾರ ಆಂಡ್ರೆ ರಸೆಲ್ ಭರ್ಜರಿ ಬ್ಯಾಟಿಂಗ್ ಸಹಾಯದಿಂದ ಕೋಲ್ಕತ್ತಾ ನೈಟ್ ರೈಡರ್ಸ್ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 200 ರನ್ ಪೇರಿಸಿದೆ.
ಡೆಲ್ಲಿ ಡೇರ್ ಡೆವಿಲ್ಸ್ ತಂಡವು ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡವು ಪ್ರಮುಖ ಆಟಗಾರ ಸುನೀಲ್ ನರೈನ್ ಅನ್ನು ಬೇಗನೇ ಕಳೆದುಕೊಂಡಿತು. ಬಳಿಕ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ರಾಬಿನ್ ಉತ್ತಪ್ಪ(35), ನಿತೀಶ್ ರಾಣಾ(59) ತಂಡದ ಮೊತ್ತವನ್ನು ಹೆಚ್ಚಿಸಲು ಸಹಕಾರಿಯಾದರು. ಬಳಿಕ ಆಂಡ್ರೆ ರಸೆಲ್ ಕೇವಲ 12 ಎಸೆತಗಳಲ್ಲಿ 41 ರನ್ ಬಾರಿಸಿದರು. ರಾಹುಲ್ ತೆವಾಟಿಯಾ ಮೂರು ವಿಕೆಟ್ ಪಡೆದರು. ಟ್ರೆಂಟ್ ಬೌಲ್ಟ್ ಮತ್ತು ಕ್ರಿಸ್ ಮೋರಿಸ್ ತಲಾ ಎರಡು ವಿಕೆಟ್ ಪಡೆದರು.