ಕಾಂಗ್ರೆಸ್ ಗೆ ನಮ್ಮ ಬೆಂಬಲ, ಹೇಳಿಕೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಮಾತೆ ಮಹಾದೇವಿ

ನ್ಯೂಸ್ ಕನ್ನಡ ವರದಿ-(17.04.18): ಲಿಂಗಾಯತ ನಾಯಕಿ ಹಾಗೂ ಬಸವ ಮಂಟಪದ ಮಾತೆ ಮಹಾದೇವಿ ಅವರು ಈ ಹಿಂದೆ ಎಲ್ಲಾ ಲಿಂಗಾಯತರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂಬ ಹೇಳಿಕೆ ನೀಡಿದ್ದರು. ರಾಜ್ಯ ಸರಕಾರವು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದರು. ಬಳಿಕ ಹೇಳಿಕೆಯನ್ನು ಹಿಂಪಡೆಯಬೇಕೆಂದು ಹಲವರು ಒತ್ತಾಯಿಸಿದ್ದರು. ಆದರೆ ಇದೀಗ ಮತ್ತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಾತೆ ಮಹಾದೇವಿ, ನಾವು ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡುತ್ತೇವೆ. ಈ ಮಾತನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.

ನಗರದ ಪ್ರೆಸ್ ಕ್ಲಬ್‍ನಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೇ ನಮ್ಮ ಬೆಂಬಲ, ಈ ಹೇಳಿಕೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಅಂತೆಯೇ ಜೆಡಿಎಸ್ ನ ಸದಸ್ಯ ಬಸವರಾಜ ಹೊರಟ್ಟಿ ಅವರು ಕಾಂಗ್ರೆಸ್ ಬೆಂಬಲಿಸಲು ನಾನು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುವಂತೆ ಒತ್ತಾಯಿಸಿರುವುದು ಹಾಸ್ಯಾಸ್ಪದವಾಗಿದೆ. ನನ್ನ ಹೇಳಿಕೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾತೆ ಮಹಾದೇವಿ ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *