ಎನ್.ಎ.ಹ್ಯಾರಿಸ್ ಗೆ ಒಂದೆರಡು ದಿನದಲ್ಲಿ ಟಿಕೆಟ್ ನೀಡಲಾಗುವುದು: ಜಿ.ಪರಮೇಶ್ವರ್

ನ್ಯೂಸ್ ಕನ್ನಡ ವರದಿ(17-04-2018): ಕಾಂಗ್ರೆಸ್ ಬಿಡುಗಡೆ ಮಾಡಿದ 218 ಸದಸ್ಯರ ಪ್ರಥಮ ಪಟ್ಟಿಯಲ್ಲಿ ಹೆಸರಿಲ್ಲದ ಶಾಂತಿನಗರ ಶಾಸಕ ಎನ್.ಎ.ಹ್ಯಾರಿಸ್ ರವರಿಗೆ ಒಂದೆರಡು ದಿನಗಳಲ್ಲಿ ಟಿಕೆಟ್ ನೀಡಲಾಗುವುದೆಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ನಿಶ್ಚಯ ಮಾಡಲಾಗಿದೆ. ಹೀಗಾಗಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೆಲ್ಲುವ ಅಭ್ಯರ್ಥಿಯೊಂದೇ ಮಾನದಂಡವಾಗಿದೆ. ಪಕ್ಷದ ಹೈ ಕಮಾಂಡ್ ಕೂಡ ನಮಗೆ ಇದೇ ನಿರ್ದೇಶವನ್ನು ನೀಡಿದೆ. ಇದನ್ನು ನಾವು ಅನುಸರಿಸುತ್ತಿದ್ದೇವೆ. ಪ್ರತೀಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆಂದು ತಿಳಿಸಿದ್ದಾರೆ.

ಶೀಘ್ರವೇ ಶಾಂತಿನಗರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿಯ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಸಿ ತಿಳಿಸಿದರು.

Leave a Reply

Your email address will not be published. Required fields are marked *