ಮಿಥುನ್ ರೈಗೆ ಕೈತಪ್ಪಿದ ಟಿಕೆಟ್: ಪುತ್ತೂರು ಯುವ ಕಾಂಗ್ರೆಸ್ ಅಧ್ಯಕ್ಷ ಯು.ಟಿ.ತೌಸೀಫ್ ರಾಜಿನಾಮೆ!
ನ್ಯೂಸ್ ಕನ್ನಡ ವರದಿ(17-04-2018): ಮೂಡಬಿದ್ರೆ ಕ್ಷೇತ್ರದಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಗೆ ಟಿಕಟ್ ನೀಡಲಾಗುತ್ತದೆ ಎಂದು ಹೇಳಲಾಗುತ್ತಿದ್ದರೂ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಪುತ್ತೂರು ಬ್ಲಾಕ್ ಯುವಕ ಕಾಂಗ್ರೆಸ್ ಅಧ್ಯಕ್ಷ ಯು.ಟಿ.ತೌಸೀಫ್ ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಯುವಕರಿಗೆ ಪ್ರಾತಿನಿದ್ಯ ನೀಡಲು ಕಾಂಗ್ರೆಸ್ ಪಕ್ಷವು ವಿಫಲವಾದ ಕಾರಣ ಯು.ಟಿ.ತೌಸೀಫ್ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಅವರೊಂದಿಗೆ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬೀರ್ ಕೆಂಪಿ ಕೂಡ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.