ಯುಟರ್ನ್ ಹೊಡೆದ ಯಡಿಯೂರಪ್ಪ: ಯಶವಂತಪುರದಿಂದ ಶೋಭಾ ಕರಂದ್ಲಾಜೆ ಸ್ಪರ್ಧೆಗೆ ನಿರ್ಧಾರ! 3ನೇ ಪಟ್ಟಿಯಲ್ಲಿ ಸೇರ್ಪಡೆ?

ನ್ಯೂಸ್ ಕನ್ನಡ ವರದಿ : ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು 2008ರ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ, 57,643 ಮತಗಳನ್ನು ಪಡೆದು ಜಯಗಳಿಸಿದ್ದರು. ಈ ಬಾರಿ ಕೂಡ ಯಶವಂತಪುರ ಕ್ಷೇತದಲ್ಲಿ ಸೂಕ್ತ ಅಭ್ಯರ್ಥಿಯಾಗಿ ಬಿಜೆಪಿ ಹುಡುಕಾಟ ನಡೆಸಿದ್ದು, ಅಂತಿಮವಾಗಿ ಉಡುಪಿ -ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ಪಕ್ಷ ತೀರ್ಮಾನ ಮಾಡಿದೆ. ಬಿಜೆಪಿಯ 3ನೇ ಪಟ್ಟಿಯಲ್ಲಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ. ಈ ಮೂಲಕ ಶೋಭಾ ಕರಂದ್ಲಾಜೆ ಅವರು ರಾಜ್ಯ ರಾಜಕಾರಣಕ್ಕೆ ವಾಪಸ್ ಬರಲಿದ್ದಾರೆಂದು ತಿಳಿದು ಬಂದಿದೆ.

ಯಶವಂತಪುರದ ಹಾಲಿ ಶಾಸಕರು ಕಾಂಗ್ರೆಸ್‌ನ ಎಸ್.ಟಿ.ಸೋಮಶೇಖರ್. ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ತುಂಬಾ ಆಪ್ತರು. ಶೋಭಾ ಕರಂದ್ಲಾಜೆ ಅವರನ್ನು ಕಣಕ್ಕಿಳಿಸಿ, ಸೋಮಶೇಖರ್ ಅವರನ್ನು ಸೋಲಿಸಲು ಬಿಜೆಪಿ ತಂತ್ರ ರೂಪಿಸಿದೆ. ಈ ಮೂಲಕ ಶೋಭಾ ಕರಂದ್ಲಾಜೆ ರವರು ರಾಜ್ಯ ರಾಜಕಾರಣಕ್ಕೆ ವಾಪಸ್ ಬರಲಿದ್ದಾರೆ. 2013 ರ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ರವರು ಕರ್ನಾಟಕ ಜನತಾ ಪಕ್ಷದಿಂದ ರಾಜಾಜಿನಗರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. 20,909 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಬಿಜೆಪಿಗೆ ವಾಪಸ್ ಆಗಿದ್ದರು. ಈಗ ಬಿಜೆಪಿ ಪರವಾಗಿ ಯಶವಂತ್ ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

Leave a Reply

Your email address will not be published. Required fields are marked *