ಸಚಿವ ಅನಂತ್ ಕುಮಾರ್ ಹೆಗ್ಡೆ ಬೆಂಗಾವಲು ಕಾರು ಅಪಘಾತ: ಕೊಲ್ಲಲು ಸಂಚು ಹೂಡಿದ್ದಾರೆಂದ ಹೆಗ್ಡೆ!

ನ್ಯೂಸ್ ಕನ್ನಡ ವರದಿ-(18.04.18): ಕೇಂದ್ರ ಕೌಶಲಾಭಿವೃದ್ಧಿ ಸಚಿವ ಹಾಗೂ ಸದಾ ವಿವಾದಾತ್ಮಕ ಮತ್ತು ಪ್ರಚೋದನಕಾರಿ ಹೇಳಿಕೆಗಳಿಂದ ಕುಖ್ಯಾತಿ ಪಡೆದಿರುವ ಅನಂತ ಕುಮಾರ್ ಹೆಗ್ಡೆಯವರ ಬೆಂಗಾವಲು ವಾಹನಕ್ಕೆ ಲಾರಿಯೊಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ವಾಹನದಲ್ಲಿದ್ದ ಪೊಲೀಸರೊಬ್ಬರು ಗಾಯಗೊಂಡ ಘಟನೆಯು ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಹಲಗೇರಿ ಕ್ರಾಸ್‌ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಎಎಸ್‌ಐ ಪ್ರಭು ತಳವಾರ ಗಾಯಗೊಂಡಿದ್ದಾರೆ.

ಸಚಿವರು ಶಿರಸಿಯಿಂದ ಬೆಂಗಳೂರಿಗೆ ಹೊರಟಿದ್ದಾಗ ಒನ್‌ವೇಯಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಲಾರಿ ಸಚಿವರ ಬೆಂಗಾವಲು ವಾಹನಕ್ಕೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ನಾಸೀರ್‌ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಅನಂತ್ ಕುಮಾರ್ ಹೆಗ್ಡೆ, ನನ್ನ ವಾಹನವು ವೇಗವಾಗಿ ಹೋಗುತ್ತಿದ್ದರಿಂದ ನಾನು ಬಚಾವಾದೆ. ಇದು ನನ್ನನ್ನು ಕೊಲೆ ಮಾಡುವ ಪ್ರಯತ್ನವಾಗಿದೆ. ನನ್ನ ಕಾರು ವೇಗವಾಗಿ ಚಲಿಸುತ್ತಿದ್ದ ಕಾರಣ ಟ್ರಕ್ ಬೆಂಗಾವಲು ವಾಹನಕ್ಕೆ ಢಿಕ್ಕಿಯಾಗಿದೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *