ದೇಶದಲ್ಲಿರುವ ನೋಟುಗಳು ಎಲ್ಲಿ ಮಾಯವಾಗಿ ಹೋಗ್ತಿವೆ ಜೇಟ್ಲಿಯವರೇ? : ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

ನ್ಯೂಸ್ ಕನ್ನಡ ವರದಿ : ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಆಡಳಿತ ಸಂಪೂರ್ಣ ನಿಷ್ಕ್ರಿಯಗೊಂಡಿದೆ. ಬ್ಯಾಂಕ್, ಎಟಿಎಂಗಳಲ್ಲಿ ಹಣವೇ ದೊರೆಯುತ್ತಿಲ್ಲ. ನೋಟು ರದ್ದತಿಯಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಸುದ್ದಿಗಾರರೊಂದಿಗೆ ಬುಧವಾರದಂದು ಮಾತನಾಡಿದ ಸಂಸದ ಮಲ್ಲಿಕಾರ್ಜುನ ಖರ್ಗೆ ತಮ್ಮ ಚಿಂತನೆಯನ್ನು ವ್ಯಕ್ತಪಡಿಸಿದರು. ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿರವರ ಹೇಳಿಕೆ ಅನ್ವಯ ದೇಶದಲ್ಲಿ ಅಗತ್ಯಕ್ಕಿಂತ ಹೆಚ್ಚೇ ನಗದು ಇದೆಯಂತೆ, ಹಾಗಾದರೆ ಆ ಎಲ್ಲ ನೋಟುಗಳು ಎಲ್ಲಿ ಹೋಗುತ್ತಿವೆ ಎಂದು ಪ್ರಶ್ನಿಸಿದರು.

ದೇಶದ ಹಿತದೃಷ್ಟಿಯಿಂದ ಮತ್ತು ಸಂವಿಧಾನದ ಆಶಯಗಳನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯದ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ರಾಜ್ಯದಲ್ಲಿ ಅಮಿತ್ ಶಾ ತಂತ್ರ ನಡೆಯುವುದಿಲ್ಲ. ಕರ್ನಾಟಕದಲ್ಲಿ ಕಳೆದ ಬಾರಿಗಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತವಾದದ್ದು ಎಂದು ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಜೆಪಿಯವರ ಕಾಂಗ್ರೆಸ್ ಮುಕ್ತ ಭಾರತ ಆಶಯಕ್ಕೆ ಕರ್ನಾಟಕದಿಂದಲೇ ತಡೆವೊಡ್ಡಲು ರಣತಂತ್ರ ರೂಪಿಸಿದ್ದೇವೆ. ಹೀಗಾಗಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿ ಬಿಜೆಪಿಯ ಕನಸನ್ನು ಕನಸಾಗಿಯೇ ಉಳಿಯುವಂತೆ ಮಾಡುತ್ತೇವೆ ಎಂದು ಹೇಳಿದರು.

Leave a Reply

Your email address will not be published. Required fields are marked *