ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಶೋಭಾ ಕರಂದ್ಲಾಜೆ ಹೇಳಿದ್ದೇನು?!

ನ್ಯೂಸ್ ಕನ್ನಡ ವರದಿ(19-04-2018): ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲS ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡುವುದರೊಂದಿಗೆ ಯಶವಂತಪುರ ಕ್ಷೇತ್ರದ s ಊಹಾಪೋಹಗಳಿಗೆo ತೆರೆ ಬಿದ್ದಂತಾಗಿದೆ.

ಲೋಕಸಭಾ ಸದಸ್ಯತ್ವದ ಅವಧಿ ಇನ್ನೂ ಒಂದು ವರ್ಷ ಬಾಕಿಯಿದ್ದು ಅದರ ನಂತರವೇ ಪಕ್ಷ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು. ನಾನು ಯಾವುದೇ ಕಾರಣಕ್ಕೂ ರಾಜ್ಯದ ರಾಜಕೀಯಕ್ಕೆ ಮರಳುವುದಿಲ್ಲ ಎಂದರು.

ಬಸವೇಶ್ವರರಿಗೆ ಮಾಲಾರ್ಪಣೆ ಮಾಡಿದ ಸಿಎಂ ಅವರನ್ನು ತೀವೃ ತರಾಟೆಗೆ ತೆಗೆದುಕೊಂಡ ಶೋಭಾ ಕರಂದ್ಲಾಜೆ, ಈ ಯೋಗ್ಯತೆ ಸಿದ್ಧರಾಮಯ್ಯನವರಿಗೆ ಇಲ್ಲ ಎಂದರು. ಪ್ರತ್ಯೇಕ ಧರ್ಮ ಮಾಡುವ ಕೆಲಸ ಸಿದ್ದರಾಮಯ್ಯನವರದ್ದಲ್ಲ, ಪ್ರತ್ಯೇಕ ಧರ್ಮದ ಮಾನ್ಯತೆ ಬಗ್ಗೆ ಸ್ವಾಮೀಜಿಗಳು, ಧರ್ಮ ಗುರುಗಳು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಟೀಕಿಸಿದರು.

Leave a Reply

Your email address will not be published. Required fields are marked *