ನ್ಯಾಯಮೂರ್ತಿ ಲೋಯಾ ಸಾವಿನ ಕುರಿತು ಇನ್ನೂ ತನಿಖೆ ನಡೆಸುವುದು ನಿಷ್ಪ್ರಯೋಜಕ: ಸುಪ್ರೀಮ್ ಕೋರ್ಟ್

ನ್ಯೂಸ್ ಕನ್ನಡ ವರದಿ-(19.04.18): ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪ್ರಮುಖ ಆರೋಪಿಯಾಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ನ ನ್ಯಾಯಾಧೀಶರಾದ ಬಿ.ಎಚ್.ಲೋಯಾ ಆಕಸ್ಮಿಕವಾಗಿ ಮೃತಪಟ್ಟಿದ್ದರು. ಈ ಸಾವಿನ ಕುರಿತಾದಂತೆ ಹಲವು ಸಂಶಯಗಳು ಮೂಡಿತ್ತು. ಆದರೆ ಲೋಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಇದೀಗ ಈ ಪ್ರಕರಣದ ಕುರಿತಾದಂತೆ ಹೆಚ್ಚಿನ ತನಿಖೆ ನಡೆಸಬೇಕು ಎಂದು ಸುಪ್ರೀಮ್ ಕೊರ್ಟ್ ನಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಮ್ ಕೋರ್ಟ್ ತಳ್ಳಿ ಹಾಕಿದೆ.

ಈ ಕುರಿತಾದಂತೆ ಸುಪ್ರೀಮ್ ಕೋರ್ಟ್ ನ ನ್ಯಾಯಾಧೀಶರಾದ ದೀಪಕ್ ಮಿಶ್ರಾ, ಡಿ.ವೈ ಚಂದ್ರಚೂಡ್ ಹಾಗೂ ಎ.ಎಮ್ ಖಾನ್ವಿಲ್ಕರ್ ನೇತೃತ್ವದ ಪೀಠವು ಲೋಯಾ ಪ್ರಕರಣದಲ್ಲಿ ಸ್ವತಂತ್ರ ತನಿಖೆಯನ್ನು ನಡೆಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಈ ಅರ್ಜಿಯು ಪ್ರಚಾರದ ಉದ್ದೇಶದಿಂದ ಸಲ್ಲಿಸಲಾಗಿದೆ ಹಾಗೂ ಇದೊಂದು ನಿಷ್ಪ್ರಯೋಜಕ ಅರ್ಜಿಯಾಗಿದೆ. ಇದರಿಂದ ನ್ಯಾಯಾಂಗ ವಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ತೀರ್ಪು ನೀಡಿದೆ.

Leave a Reply

Your email address will not be published. Required fields are marked *