ಕಾಂಗ್ರೆಸ್ ಪಕ್ಷಕ್ಕೆ ಬಿಗ್ ಶಾಕ್: ದಿಢೀರನೆ ಪಕ್ಷ ಬಿಟ್ಟು ಜೆಡಿಎಸ್ ಸೇರಿದ್ದಾರೆ ಈ ನಟ?! ಮುಂದೆ ಓದಿ..
ನ್ಯೂಸ್ ಕನ್ನಡ ವರದಿ: ರಾಜ್ಯದಲ್ಲಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಹೊಸ ಹೊಸ ರಾಜಕೀಯ ಬೆಳವಣಿಗೆಗಳು ಕಂಡುಬರುತ್ತಿದೆ. ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಟ ಶಶಿಕುಮಾರ್ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ಶಶಿಕುಮಾರ್ ಹೊಸದುರ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಈ ಬಾರಿ ಬಿ.ಜಿ.ಗೋವಿಂದಪ್ಪರಿಗೆ ಟಿಕೆಟ್ ನೀಡಿದೆ. ಇದ್ರಿಂದ ಅಸಮಾಧಾನಗೊಂಡಿದ್ದ ಶಶಿಕುಮಾರ್ ಕಾಂಗ್ರೆಸ್ ತೊರೆದು ಪ್ರಾದೇಶಿಕ ಪಕ್ಷ ಜೆಡಿಎಸ್ ಗೆ ಸೇರಿದ್ದಾರೆ.
ಜೆಡಿಎಸ್ ನಾಯಕರು ಶಶಿಕುಮಾರ್ ಅವರಿಗೆ ಹೊಸದುರ್ಗ ಕ್ಷೇತ್ರದಿಂದಲೇ ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ. ಇತ್ತೀಚೆಗೆ ನಟಿ ಅಮೂಲ್ಯ ಜಗದೀಶ್ ಜೆಡಿಎಸ್ ಸೇರಿದ್ದರು.