ಕ್ರಿಸ್ ಗೇಲ್ ಭರ್ಜರಿ ಶತಕ: ಬೃಹತ್ ಮೊತ್ತ ಪೇರಿಸಿದ ಪಂಜಾಬ್ ತಂಡ!
ನ್ಯೂಸ್ ಕನ್ನಡ ವರದಿ-(19.04.18): ಇಂಡಿಯನ್ ಪ್ರೀಮಿಯರ್ ಲೀಗ್ ನ 16ನೇ ಪಂದ್ಯಾಟವು ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವೆ ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಶನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ವೆಸ್ಟ್ ಇಂಡೀಸ್ ನ ದೈತ್ಯ ಆಟಗಾರ ಕ್ರಿಸ್ ಗೇಲ್ ರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ 20 ಓವರ್ ಗಳಲ್ಲಿ ಮೂರು ವಿಕೆಟ್ ಗಳ ನಷ್ಟಕ್ಕೆ 193 ರನ್ ದಾಖಲಿಸಿದೆ.
ಟಾಸ್ ಗೆದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆರಂಭದಲ್ಲೇ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನವನ್ನು ತೋರಿದ ಕ್ರಿಸ್ ಗೇಲ್ ಕೇವಲ 63 ಎಸೆತಗಳಲ್ಲಿ ಭರ್ಜರಿ 104 ರನ್ ದಾಖಲಿಸಿದರು. ಕ್ರಿಸ್ ಗೇಲ್ ರ ಮನಮೋಹಕ ಇನ್ನಿಂಗ್ಸ್ ನಲ್ಲಿ ಭರ್ಜರಿ 11 ಸಿಕ್ಸರ್ ಗಳು ಒಳಗೊಂಡಿತ್ತು. ಕನ್ನಡಿಗ ಕರುಣ್ ನಾಯರ್ 31 ರನ್ ಗಳಿಸಿದರು.