ಮನೋಹರ್ ಪಾರಿಕ್ಕರ್ ಆರೋಗ್ಯ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿದ್ದ ವ್ಯಕ್ತಿಯ ಬಂಧನ! ಯಾರು ಆತ ಗೊತ್ತೇ?
ನ್ಯೂಸ್ ಕನ್ನಡ ವರದಿ : ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಪ್ಯಾಂಕ್ರಿಯಾಟೈಸಿಸ್ ತೊಂದರೆಯಿಂದ ಬಳಲುತ್ತಿದ್ದು, ಗೋವಾದ ಮೆಡಿಕಲ್ ಕಾಲೇಜಿನಲ್ಲಿ ಮತ್ತು ಮುಂಬಯಿಯ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅಮೇರಿಕಕ್ಕೆ ತೆರಳಿದ್ದರು. ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು ಚೇತರಿಸಿಕೊಂಡಿದ್ದಾರೆ.
ಗುಣಮುಖರಾಗಿ ಹಿಂದಿರುಗಿ ಬಂದು ಪುನಃ ತಮ್ಮ ಹುದ್ದೆಯನ್ನು ಮುಂದುವರೆದು ಕರ್ನಾಟಕ ಚುನಾವಣಾ ಪ್ರಚಾರದಲ್ಲೂ ಪಾಲ್ಗೊಳ್ಳಲಿದ್ದಾರೆ. ಆದರೆ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಹಲವು ಸುಳ್ಳು ವದಂತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದ ವ್ಯಕ್ತಿಯನ್ನು ಗೋವಾ ಕ್ರೈಂ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ರಾಜ್ಯಾದ್ಯಂತ ದೊಡ್ಡ ತಲೆನೋವಾಗಿ ಪರಿಣಮಿಸಿದ್ದ, ನಿರಂತರವಾಗಿ ಮನೋಹರ್ ಪಾರಿಕ್ಕರ್ ಬಗ್ಗೆ ಪುಂಖಾನುಪುಂಖವಾಗಿ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬೇರೆ ಬೇರೆ ನಕಲಿ ಖಾತೆಗಳಲ್ಲಿ ಹರಡಿ ಸಮಾಜದಲ್ಲಿ ಗೊಂದಲದ ವಾತಾವರಣ ನಿರ್ಮಾಣ ಮಾಡಿದಾತ ಯಾರೆಂದು ಕೊನೆಗೂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಗೋವದ ಯುವಕ ಕೆನ್ನೆತ್ ಸಿಲ್ವಿರಾ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತನ ವಿರುದ್ಧ ಆತಂಕ ಸೃಷ್ಟಿ, ಸುಳ್ಳುಸುದ್ದಿ ಹರಡುವಿಕೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 505ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.