ಟಿಕೆಟ್ ಸಿಗದ ಕಾರಣ ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಸಂಸದ!
ನ್ಯೂಸ್ ಕನ್ನಡ ವರದಿ-(20.04.18): ಕರ್ನಾಟಕದಲ್ಲಿ ಮೇ 12ರಂದು ವಿಧಾನಸಭಾ ಚುನಾವಣೆಯು ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ತಮ್ಮ ಪಕ್ಷವನ್ನು ಪ್ರತಿನಿಧಿಕೊಂಡು ಚುನಾವಣೆಗೆ ಸ್ಫರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಅಸಮಧಾನವೂ ಭುಗಿಲೆದ್ದಿದೆ. ಇದೀಗ ಬಿಜೆಪಿ ಪಕ್ಷವು ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿಲ್ಲವೆಂದು ಬಿಜೆಪಿಯ ಮಾಜಿ ಸಂಸದ ವಿರೂಪಾಕ್ಷಪ್ಪ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಟಿಕೆಟ್ ಕೈ ತಪ್ಪಿದ್ದ ಹಿನ್ನೆಲೆಯಿಂದಾಗಿ ಬಿಜೆಪಿ ಗುಡ್ಬೈ ಹೇಳಿ ಅಸಮಾಧಾನ ಹೊರಹಾಕಿದ್ದಾರೆ. ಸಿಂಧನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಲ್ಲಾ ಶೇಷಗಿರಿರಾವ್ ಅವರಿಗೆ ಸಿಕ್ಕಿದೆ. ಸಿಂಧನೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಟಿಕೆಟ್ ಕೈ ತಪ್ಪಿದ್ದ ಹಿನ್ನೆಲೆಯಿಂದಾಗಿ ಬಿಜೆಪಿ ಗುಡ್ಬೈ ಹೇಳಿ ಅಸಮಾಧಾನ ಹೊರಹಾಕಿದ್ದಾರೆ. ಸಿಂಧನೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಲ್ಲಾ ಶೇಷಗಿರಿರಾವ್ ಅವರಿಗೆ ಸಿಕ್ಕಿದೆ.