ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರಕಾರ ಚಿಂತನೆ?!
ನ್ಯೂಸ್ ಕನ್ನಡ ವರದಿ(21-04-2018): ಹನ್ನೆರಡು ವರ್ಷಕ್ಕಿಂತ ಕೆಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಆರೋಪಿಗಳಿಗೆ ಗಲ್ಲು ನೀಡುವ ಪ್ರಸ್ತಾಪವು ಕೇಂದ್ರ ಸರಕಾರದ ಮುಂದಿದೆ. ಶೀಘ್ರದಲ್ಲಿಯೇ ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವ ಕುರಿತು ಕೇಂದ್ರ ಸರಕಾರವು ಸುಗ್ರೀವಾಜ್ಞೆ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಜಮ್ಮುವಿನ ಕಥುವಾ ಹಾಗೂ ಉತ್ತರ ಪ್ರದೇಶದ ಉನ್ನಾವ್ ಪ್ರಕರಣಗಳ ಆರೋಪಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂಬ ಒತ್ತಾಯ ದೇಶದ ಮೂಲೆಮೂಲೆಯಿಂದ ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಕೇಂದ್ರವು ಈ ನಿರ್ಧಾರಕ್ಕೆ ಬಂದಿದೆ ಎಂದು ತಿಳಿದು ಬಂದಿದೆ.
ಮಕ್ಕಳ ಅತ್ಯಾಚಾರಿಗಳಿಗೆ ಈಗ ಪೋಕ್ಸೋ ಕಾಯ್ದೆಯಡಿಯಲ್ಲಿ ಜೀವಾವಧಿ ಶಿಕ್ಷೆ ನೀಡುವ ಅವಕಾಶವಿದ್ದು, ಈ ಜೀವಾವಧಿ ಶಿಕ್ಷೆಯನ್ನು ಗಲ್ಲು ಶಿಕ್ಷೆಯಾಗಿ ಪರಿವರ್ತಿಸಲು ಕೇಂದ್ರ ಸರಕಾರವು ಚಿಂತನೆ ನಡೆಸುತ್ತಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ.