ಅಧಿಕೃತವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡ ನಟಿ ಪೂಜಾ ಗಾಂಧಿ!
ನ್ಯೂಸ್ ಕನ್ನಡ ವರದಿ-(21.04.18): ತಾನು ಮೊತ್ತಮೊದಲು ರಾಜಕೀಯ ಪ್ರವೇಶ ಮಾಡಿದ್ದ ಪಕ್ಷಕ್ಕೆ ಮುಂಗಾರು ಮಳೆ ಖ್ಯಾತಿಯ ಪೂಜಾ ಗಾಂಧಿ ಮರಳಿ ಆಗಮಿಸಿದ್ದಾರೆ. ಮೊದಲು ಜಾತ್ಯತೀತ ಜನತಾದಳ ಪಕ್ಷದ ಮೂಲಕ ರಾಜಕೀಯ ರಂಗಪ್ರವೇಶ ಮಾಡಿದ್ದ ಪೂಜಾ ಗಾಂಧಿ ಬಳಿಕ ಜೆಡಿಎಸ್ ತೊರೆದು ಬಿಎಸ್ಸಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ಮತ್ತೆ ಪೂಜಾಗಾಂಧಿ ಕರ್ನಾಟಕ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಜೆಡಿಎಸ್ ಪಕ್ಷಕ್ಕೆ ಮರಳಿದ್ದಾರೆ.
ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡರು. ಜೆಡಿಎಸ್ ಕಾರ್ಯಾಧ್ಯಕ್ಷ ಪಿಜಿಆರ್ ಸಿಂಧ್ಯಾ ಅವರು ಪೂಜಾ ಗಾಂದಿಗೆ ಪಕ್ಷದ ಭಾವುಟ ನೀಡಿ ಸ್ವಾಗತಿಸಿದರು. 2013ರ ವಿಧಾನಸಭಾ ಚುನಾವಣೆಯಲ್ಲಿ ಪೂಜಾ ಗಾಂಧಿ ಅವರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ರಾಯಚೂರು ಕ್ಷೇತ್ರದಿಂದ ಕಣಕ್ಕಿಳಿದು ಹೀನಾಯವಾಗಿ ಸೋಲು ಅನುಭವಿಸಿದ್ದರು.