ಸಿಂದಗಿ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಭರ್ಜರಿ ಗೆಲುವು: ಹಾನಗಲ್ ಕಾಂಗ್ರೆಸ್ ಮುನ್ನಡೆ

ವಿಜಯಪುರ: ಸಿಂದಗಿ ಅಸೆಂಬ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಜಯಭೇರಿ ಬಾರಿಸಿದ್ದಾರೆ, ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ. 36 ವರ್ಷದ ರಮೇಶ್ ಭೂಸನೂರ ಅವರ ಪರ ಕಾರ್ಯಕರ್ತರು ಘೋಷಣೆ ಕೂಗಿ, ಜಯಕಾರ ಹಾಕುತ್ತಿದ್ದಾರೆ. ತೀವ್ರ ಪೈಪೋಟಿ ನೀಡಿದ್ದ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಠೇವಣಿಯನ್ನೂ ವಾಪಸ್​ ಗಳಿಸದೆ, ಸೋಲನ್ನೊಪ್ಪಿದ್ದಾರೆ. ತೀವ್ರ ಜಿದ್ದಾಜಿದ್ದಿಯಿಂದ ಕೂಡಿದ್ದ ಫಲಿತಾಂಶದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ್ ಭೂಸನೂರ ಸಮಾಧಾನಕರ ಅಂತರದಲ್ಲಿ ಗೆದ್ದಿದ್ದಾರೆ. ಕರ್ನಾಟಕ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆದಿತ್ತು.

ನಿರಂತರವಾಗಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ರಮೇಶ ಭೂಸನೂರ ಅವರು ಪ್ರತಿ ಹಂತದ ಮತ ಎಣಿಕೆಯಲ್ಲೂ ಮತ ಅಂತರವನ್ನು ಹಿಗ್ಗಿಸಿಕೊಳ್ಳುತ್ತಾ ಮುನ್ನಡೆದರು. ರಮೇಶ ಭೂಸನೂರ ಪಡೆದಿರುವ ಮತಗಳು 93,865. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಗೆಲುವು ಬಹುತೇಕ ಖಚಿತವಾಗಿದ್ದು, ಬಿಜೆಪಿಯಲ್ಲಿ ಸಂಭ್ರಮ ಮನೆ ಮಾಡಿದೆ. (BJP – 31,185 lead in Sindagi)

ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಭರ್ಜರಿ ಗೆಲುವು; ಗಳಿಸಿದ ಮತ ವಿವರ
31,185 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗೆ ಜಯ. ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರಗೆ 93,865 ಮತ. ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಮನಗೂಳಿಗೆ 62,680 ಮತ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿಗೆ 4,353 ಮತ ದೊರೆತಿದೆ.

ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ: ಇನ್ನು ಹಾನಗಲ್ ಕ್ಷೇತ್ರದ ಉಪ ಚುನಾವಣೆಯ 11ನೇ ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ 50 ಸಾವಿರಕ್ಕಿಂತ ಹೆಚ್ಚು ಮತಗಳನ್ನು ಗಳಿಸಿ 5 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೊನ್ನೆ 30ರಂದು ಆ ಎರಡು ಕ್ಷೇತ್ರಗಳಿಗೆ ನಡೆದ ಮತದಾನದಲ್ಲಿ ಸಿಂದಗಿ ಕ್ಷೇತ್ರದಲ್ಲಿ ಶೇಕಡಾ 69.41ರಷ್ಟು ಮತ್ತು ಹಾನಗಲ್ ನಲ್ಲಿ ಶೇಕಡಾ 83.72ರಷ್ಟು ಮತದಾನವಾಗಿದೆ.

Leave a Reply

Your email address will not be published. Required fields are marked *