ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬಹಿರಂಗ ಬೆದರಿಕೆ ಹಾಕಿದ ಹಿನ್ನೆಲೆ; ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ವಿರುದ್ಧ ದೂರು ನೀಡಿದ ಮಂಗಳೂರು ಜಿಲ್ಲಾಧಿಕಾರಿ

ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ವಿರುದ್ಧ ಮಂಗಳೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ದೂರು ನೀಡಿದ್ದಾರೆ.

ನವೆಂಬರ್ 22ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿ ಭಾಷಣ ಮಾಡುವ ವೇಳೆ, ಜಿಲ್ಲಾಧಿಕಾರಿ ಕೊರಳಪಟ್ಟಿ ಹಿಡಿಯುತ್ತೇವೆ ಎಂದು ಬಹಿರಂಗ ಬೆದರಿಕೆ ಹಾಕಿದ ಹಿನ್ನೆಲೆ ಜಗದೀಶ್ ಕಾರಂತ್ ವಿರುದ್ಧ ದೂರು ದಾಖಲಿಸಲಾಗಿದೆ.

ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ನಾಲಿಗೆ ಹರಿಬಿಟ್ಟಿದ್ದ ಜಗದೀಶ್ ಕಾರಂತ್ ವಿರುದ್ಧ ಇದೀಗ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಅಕ್ರಮ ಗಣಿಗಾರಿಕೆ ವಿರುದ್ಧ ಪಾದಯಾತ್ರೆಯಲ್ಲಿ ಭಾಷಣದ ವೇಳೆ ಜಗದೀಶ್ ಕಾರಂತ್ ಬಹಿರಂಗ ಬೆದರಿಕೆ ಹಾಕಿದ್ದರು. ಹೀಗಾಗಿ ಡಿಸಿ ಡಾ.ಕೆ.ವಿ. ರಾಜೇಂದ್ರ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *