ಕರ್ನಾಟಕದಿಂದಲೇ ರಾಹುಲ್ ಗಾಂಧಿ ಲೋಕಸಭೆಗೆ ಸ್ಪರ್ಧಿಸಲು ಆಹ್ವಾನಿಸಿದ್ದೇವೆ!: ದಿನೇಶ್ ಗುಂಡೂರಾವ್

ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆ ಹತ್ತಿರ ಬಂದಂತೆ ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ರಾಜ್ಯಾದ್ಯಂತ ಪ್ರವಾಸ ಮಾಡಿ ಚುರುಕಿನ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಮಧ್ಯೆ ಚಾಮರಾಜನಗರದಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಕೇವಲ ಉತ್ತರ ಭಾರತದಿಂದ ಮಾತ್ರ ಸ್ಪರ್ಧೆ ಮಾಡುವುದಲ್ಲ. ದಕ್ಷಿಣ ಭಾರತದಿಂದಲೂ ಸ್ಪರ್ಧೆ ಮಾಡಲಿ. ಅದರಲ್ಲೂ ಕರ್ನಾಟಕದಿಂದಲೇ ಸ್ಪರ್ಧೆ ಮಾಡಲಿ ಎಂದು ಹೇಳಿ ಆಹ್ವಾನ ನೀಡಿದ್ದಾರೆ.

ಈ ಹಿಂದೆ ಕರ್ನಾಟಕದಿಂದಲೇ ನಾವು ಕಾಂಗ್ರೆಸ್ ಅಧಿನಾಯಕಿಯರಿಗೆ ಲೋಕಸಭೆಗೆ ಆರಿಸಿ ಕಳುಹಿಸಿದ್ದೇವೆ. ಬಳ್ಳಾರಿಯಿಂದ ಸೋನಿಯಾ ಗಾಂಧಿ, ಚಿಕ್ಕಮಗಳೂರಿನಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರನ್ನು ಕರ್ನಾಟಕದ ಜನ ಆಶೀರ್ವದಿಸಿದ್ದಾರೆ, ಅದೇ ರೀತಿ ಈ ಬಾರಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲಿ ಎಂದು ಆಹ್ವಾನಿಸಿದ್ದಾರೆ.

Leave a Reply

Your email address will not be published. Required fields are marked *