ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರಕ್ಕೆ ನಿರಾಕರಿಸಿದ ಸಿದ್ದರಾಮಯ್ಯ ! ಹೇಳಿದ್ದೇನು ?

ನ್ಯೂಸ್ ಕನ್ನಡ ವರದಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ನಾಯಕರು ಜೆಡಿಎಸ್ ಜೊತೆಗಿನ ಮೈತ್ರಿಯ ಬಗ್ಗೆಯೇ ಅಸಮಾಧಾನಗೊಂಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ‘ದೋಸ್ತಿ’ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದರೂ ಸ್ಥಳೀಯ ಕಾಂಗ್ರೆಸ್ ನಾಯಕರು ಮಾತ್ರ ಹೊಂದಾಣಿಕೆಯ ಸ್ಪರ್ಧೆ ವಿರುದ್ಧ ಮತ್ತೆ ಬಹಿರಂಗವಾಗಿಯೇ ಕಿಡಿಕಾರಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ನಯವಾಗಿ ನಿರಾಕರಿಸಿದ್ದಾರೆ.

ನಿಖಿಲ್ ಪರ ಪ್ರಚಾರ ಮಾಡುವಂತೆ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಮಾಡಿದ ಮನವಿಯನ್ನು ನಯವಾಗಿ ತಿರಸ್ಕರಿಸಿರುವ ಸಿದ್ದರಾಮಯ್ಯ, ದೇವೇಗೌಡರೊಂದಿಗೆ ಪ್ರಚಾರಕ್ಕೆ ಬರುವುದಾಗಿ ತಿಳಿಸಿದ್ದಾರೆ. ಈ ಮೂಲಕ ವೈಯಕ್ತಿಕವಾಗಿ ಪ್ರಚಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ನಿಖಿಲ್ ಕುಮಾರಸ್ವಾಮಿ ನಾಳೆ ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಸಿದ್ದರಾಮಯ್ಯ ಗೈರು ಹಾಜರಾಗಲಿದ್ದಾರೆ. ನಾಳೆ ಚಿತ್ರದುರ್ಗದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲಿದ್ದು, ಅಲ್ಲಿಗೇ ಹೋಗಬೇಕಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸಿದರೆ ಮಂಡ್ಯದಲ್ಲಿ ಏನಾಗ್ತಿದೆ ಅನ್ನೋದು ಯಾರ ತರ್ಕಕ್ಕೂ ನಿಲುಕುತ್ತಿಲ್ಲ.

Leave a Reply

Your email address will not be published. Required fields are marked *