ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲು!

ನ್ಯೂಸ್ ಕನ್ನಡ ವರದಿ-(08.04.18): ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ಪ್ರಕಟವಾಗಿದ್ದು, ಸದ್ಯ ಚುನಾವಣಾ ನೀತಿ ಸಂಹಿತೆಯೂ ಜಾರಿಯಾಗಿದೆ. ಇದೀಗ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕರ್ನಾಟಕ ರಾಜ್ಯ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ ಆರೋಪದ ಮೇರೆಗೆ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಚುನಾವಣಾಧಿಕಾರಿಗಳು ಉಡುಪಿಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ.

ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ಸದ್ಯ ಕಾಮನ್ ವೆಲ್ತ್ ಗೇಮ್ಸ್ ನಡೆಯುತ್ತಿದೆ. ಭಾರತದ ಕ್ರೀಡಾಳುಗಳು ಉತ್ತಮ ಸಾಧನೆಯನ್ನೂ ಮಾಡುತ್ತಿದ್ದಾರೆ. ಕುಂದಾಪುರದ ಗುರುರಾಜ್ ಪೂಜಾರಿ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಇವರಿಗೆ 25ಲಕ್ಷ ರೂಪಾಯಿ ನಗದು ಬಹುಮಾನ ಮತ್ತು ಸರಕಾರಿ ಉದ್ಯೋಗವನ್ನು ನಮ್ಮ ಸರಕಾರದ ಮೂಲಕ ನೀಡಲಾಗುತ್ತದೆ urce ಕೆಳಗಿನ ಲಿಂಕ್ ನಲ್ಲಿ ನಿಮಗೆ ಸಿಗುತ್ತದೆ. ಎಂದು ಪ್ರಮೋದ್ ಮಧ್ವರಾಜ್ ಮಾಧ್ಯಮಗಳೊಂದಿಗೆ ಹೇಳಿದ್ದರು. ಈ ಕಾರಣದಿಂದಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆಂದು ದೂರು ದಾಖಲಾಗಿದೆ.

Leave a Reply

Your email address will not be published. Required fields are marked *