ರಾಜ್ಯದ ಮೈತ್ರಿ ಸರ್ಕಾರ ಲೋಕಸಭಾ ಚುನಾವಣೆಯ ನಂತರ ಪತನ ಖಚಿತ!: ಈಶ್ವರಪ್ಪ

ನ್ಯೂಸ್ ಕನ್ನಡ ವರದಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸಮ್ಮಿಶ್ರ ಸರ್ಕಾರ ಕಚ್ಚಾಟ ಶುರುವಾಗಿ ತಾನಾಗಿಯೇ ಪತನಗೊಳ್ಳಲಿದೆ ಎಂದು ಮಾಜಿ ಡಿಸಿಎಂ ಹಾಗೂ ಶಾಸಕ ಕೆ.ಎಸ್.ಈಶ್ವರಪ್ಪ ಇಂದಿಲ್ಲಿ ಭವಿಷ್ಯ ನುಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ನಾಯಕರ ನಡುವೆ ಅಸಮಾಧಾನ ಹೊಗೆಯಾಡುತ್ತಿದೆ. ಇನ್ನೂ ಕಾರ್ಯಕರ್ತರು ಈ ಅಪವಿತ್ರ ಮೈತ್ರಿ ವಿರುದ್ಧ ಬಹಿರಂಗವಾಗಿ ಬಂಡಾಯವೆದಿದ್ದಾರೆ. ಇದು ತಾರಕ್ಕೇರಿ ಲೋಕಸಭಾ ಚುನಾವಣೆ ನಂತರ ಸರ್ಕಾರ ಪತನಗೊಳ್ಳಲಿದೆ ಎಂದು ಹೇಳಿದ್ದಾರೆ.

ಹಿಂದು ವರ್ಗಗಳ ನಾಯಕ ಎಂದು ಸಿದ್ದರಾಮಯ್ಯ ಏನು ಮಾಡಿಲ್ಲ, ತುಮಕೂರು, ಮೈಸೂರು ಸೇರಿದಂತೆ ವಿವಿಧೆಡೆ ಮೈತ್ರಿ ಅಭ್ಯರ್ಥಿಗಳು ಸೋಲುತ್ತಾರೆಂಬ ಭೀತಿ ಇವರಿಗೆ ಕಾಡುತ್ತಿದೆ. ಅವರವರೇ ಕಾಲೆಳೆದುಕೊಂಡು ಚುನಾವಣೆಯಲ್ಲಿ ಸೋಲುವ ಭಯ. ಮೈತ್ರಿ ಪಕ್ಷದ ನಾಯಕರನ್ನಾ ಕಾಡುತ್ತಿದ್ದೆ ಎಂದು ಟೀಕಾಪ್ರಹಾರ ಮಾಡಿದರು. ಕೇಂದ್ರ ಬಿಜೆಪಿ ಸರ್ಕಾರ ಎಲ್ಲ ವರ್ಗ, ಸಮುದಾಯಗಳ ಏಳಿಗೆಗೆ ಶ್ರಮಿಸಿದೆ. ಆರೋಗ್ಯ, ಭದ್ರತೆ, ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಬ್ ಕೇ ಸಾಥ್, ಸಬ್ ಕೇ ವಿಕಾಸ್ ಎಂಬ ಧ್ಯೇಯದೊಂದಿಗೆ ಪ್ರಧಾನಿ ಮೋದಿಯವರು ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಅದೇ ಅವರಿಗೆ ಶ್ರೀರಕ್ಷೆಯಾಗಲಿದ್ದು ಮುಂದಿನ ಸರ್ಕಾರ ನಮ್ಮದೇ ಎಂದು ಈಶ್ವರಪ್ಪ ಹೇಳಿದರು.

Leave a Reply

Your email address will not be published. Required fields are marked *