ದೇವೇಗೌಡರು ಪ್ರಧಾನಮಂತ್ರಿಯಾಗಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದ ಕುಮಾರಸ್ವಾಮಿ ! ಹೇಳಿದ್ದೇನು ?

ನ್ಯೂಸ್ ಕನ್ನಡ ವರದಿ : ದೇಶದಾದ್ಯಂತ ಸುದ್ದಿಯಾಗಿರುವ ಲೋಕಸಭಾ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. ಇನ್ನು ಎಪ್ರಿಲ್ 11ರಿಂದ ಏಳು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಏಪ್ರಿಲ್ 18 ಮತ್ತು 23 ರಂದು ಕರ್ನಾಟಕದಲ್ಲಿ ಮತದಾನ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿ (ಎಸ್) ಮೈತ್ರಿ ಕರ್ನಾಟಕದಲ್ಲಿ 20-22 ಸೀಟುಗಳನ್ನು ಗೆದ್ದರೆ, ಕನ್ನಡಿಗ ಮತ್ತೊಮ್ಮೆ ದೇಶದ ಪ್ರಧಾನಿಯಾಗಬಹುದು ಎಂದು ಫೆಬ್ರವರಿ 27 ರಂದು ಕುಮಾರಸ್ವಾಮಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಮಹಾಘಟಬಂಧನ್ ಯಶಸ್ವಿಯಾಗಿ ಅಧಿಕಾರಕ್ಕೆ ಬಂದರೆ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಪ್ರಧಾನಮಂತ್ರಿಯಾಗಲಿದ್ದಾರೆ ಎಂಬ ಊಹಾಪೋಹಗಳು ಸದ್ಯಕ್ಕೆ ದೂರವಾದವು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭಾನುವಾರ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಮಹಾಘಟಬಂಧನ್ ಅಧಿಕಾರಕ್ಕೆ ಬಂದರೂ ದೇವೇಗೌಡರು ಪ್ರಧಾನಿಯಾಗಲ್ಲ. “ದೇವೇಗೌಡರು ಸರ್ಕಾರಕ್ಕೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ ಮತ್ತು ದೇಶದ ಹಿತಾಸಕ್ತಿ ಬಗ್ಗೆ ಕಾಳಜಿ ವಹಿಸುತ್ತಾರೆ ಎಂದು ಹೇಳಿದರು. ಅದಾಗ್ಯೂ ಸಂಭವನೀಯ ಪ್ರಧಾನಿ ಯಾರೆಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಲು ಸಿಎಂ ನಿರಾಕರಿಸಿದರು. ಒಟ್ಟಿನಲ್ಲಿ ಲೋಕಸಭಾ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿವೆ. ಹೀಗಾಗಿ ರಾಜಕೀಯ ಪಕ್ಷಗಳಲ್ಲಿ ಹೊಸ ಹುರುಪು ಬಂದಿದೆ.

Leave a Reply

Your email address will not be published. Required fields are marked *