ಉತ್ತರಪ್ರದೇಶ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ ಪ್ರಿಯಾಂಕಾ ಗಾಂಧಿ; ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿಗೆ ಟಿಕೆಟ್: 125 ಮಂದಿಯಲ್ಲಿ 50 ಮಂದಿ ಮಹಿಳೆಯರು ಕಣಕ್ಕೆ

ಲಖನೌ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ಉತ್ತರಪ್ರದೇಶ ವಿಧಾನಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪಟ್ಟಿಯಲ್ಲಿ ಒಟ್ಟು 125 ಮಂದಿಯಿದ್ದು ಅವರಲ್ಲಿ 50 ಮಂದಿ ಮಹಿಳೆಯರಾಗಿದ್ದಾರೆ.

ದೇಶಾದ್ಯಂತ ಸಂಚಲನ ಮೂಡಿಸಿದ್ದ ಉನ್ನಾವೊ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಅವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ನೀಡಿದ್ದು ಅಚ್ಚರಿ ಮೂಡಿಸಿದೆ.

ಈ ವೇಳೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಅಬ್ಯರ್ಥಿಗಳಲ್ಲಿ ಶೇ.40 ಪ್ರತಿಶತ ಮಹಿಳೆಯರಿದ್ದಾರೆ ಎಂದು ಸಂತಸದಿಂದ ಹೇಳಿಕೊಂಡರು. ಅಲ್ಲದೆ ಶೇ. 40 ಮಂದಿ ಯುವಕರಾಗಿದ್ದಾರೆ ಎಂದರು. ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಇತಿಹಾಸ ಸೃಷ್ಟಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *