ಬಿಜೆಪಿ ಶಾಸಕ ರೇಣುಕಾಚಾರ್ಯ ಅರೆಸ್ಟ್! ಕಾರಣವೇನು ಗೊತ್ತೇ? ಮುಂದೆ ಓದಿ..

ನ್ಯೂಸ್ ಕನ್ನಡ ವರದಿ: ರೈತರ ಪರ ಹೋರಾಟ ನಡೆಸಿದ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾದರೂ ಬೆಂಗಳೂರು,ಮೇ 31- ಪದೇ ಪದೇ ವಿಚಾರಣೆಗೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಸಂಜೆವರೆಗೂ ಪೊಲೀಸ್ ವಶಕ್ಕೆ ನೀಡಿದೆ.

ಇಂದು ಬೆಳಗ್ಗೆ ತಮ್ಮ ವಕೀಲರೊಂದಿಗೆ ನ್ಯಾಯಾಲಯಕ್ಕೆ ಆಗಮಿಸಿದ ರೇಣುಕಾಚಾರ್ಯ ಅವರನ್ನು ನ್ಯಾಯಾಧೀಶರು ಪೊಲೀಸರ ವಶಕ್ಕೆ ನೀಡಿ ಸಂಜೆ 5 ಗಂಟೆವರೆಗೂ ಇಲ್ಲಿಯೇ ಇರುವಂತೆ ಸೂಚಿಸಿದರು. ಕಳೆದ ವರ್ಷ ದಾವಣಗೆರೆ ಜಿಲ್ಲೆಯ ರೈತರಿಗೆ ನೀರೊದಗಿಸುವ ಭದ್ರಾ ಡ್ಯಾಮ್‍ನಿಂದ ನೀರು ಹರಿಸುವಂತೆ ಶಿವಮೊಗ್ಗ ಜಿಲ್ಲೆ ಮಲವಗೊಪ್ಪ ಕಾಡಾ ಕಚೇರಿ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಈ ವೇಳೆ ರೈತರ ಜತೆಗೂಡಿ ರಸ್ತೆ ತಡೆಯನ್ನು ನಡೆಸಿದ್ದರಿಂದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ಜಟಾಪಟಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಸೇರಿದಂತೆ ಅನೇಕರ ವಿರುದ್ಧ ದೂರು ದಾಖಲಾಗಿತ್ತು.

Leave a Reply

Your email address will not be published. Required fields are marked *