ಮಹರಾಷ್ಟ್ರ: ಮುಂಬರುವ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಶಿವಸೇನೆಯ ಆದಿತ್ಯ ಠಾಕ್ರೆ ?

ನ್ಯೂಸ್ ಕನ್ನಡ ವರದಿ : ಶಿವಸೇನಾ ಪಕ್ಷದ ವಕ್ತಾರ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರು ಮರಾಠಿ ಚಾನಲ್ ಗೆ ನೀಡಿರುವ ಸಂದರ್ಶನದಲ್ಲಿ ಮುಂಬರುವ ವಿಧಾನಸಭೆಯಲ್ಲಿ ಶಿವಸೇನಾ ಪಕ್ಷವು ಯುವ ಘಟಕದ ಮುಖ್ಯಸ್ಥ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿಸುವ ಸಾಧ್ಯತೆ ಇದೆ ಎಂಬ ಸುಳಿವನ್ನು ನೀಡಿದ್ದಾರೆ. ಆದಿತ್ಯ ಠಾಕ್ರೆ ಸ್ವತಃ ಚುನಾವಣಾ ಕ್ಷೇತ್ರದ ಪ್ರವೇಶಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರವನ್ನು ಪಕ್ಷದ ಅಧ್ಯಕ್ಷ ಉದ್ಧವ್ ಠಾಕ್ರೆಯವರು ತೆಗೆದುಕೊಳ್ಳಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಆದಿತ್ಯ ಠಾಕ್ರೆ ಅವರು ಮುಂಬರುವ ವಿಧಾನಸಭೆ ಚುನಾವಣೆ ಸಿದ್ದತೆ ನಡೆಸಿದ್ದಾರೆ ಎಂದು ಹೇಳಿದ ಅವರು ” ಠಾಕ್ರೆ ಅವರು ಉಪಮುಖ್ಯಮಂತ್ರಿ ಹುದ್ದೆಯನ್ನು ತೆಗೆದುಕೊಳ್ಳುವುದಿಲ್ಲ. ಕುಟುಂಬದ ಸದಸ್ಯರು ಯಾವಾಗಲೂ ಮುಖ್ಯಸ್ಥರಾಗಿರುತ್ತಾರೆ ಮತ್ತು ಕುಟುಂಬವು ರಾಜ್ಯ ಮತ್ತು ರಾಷ್ಟ್ರೀಯ ರಾಜಕೀಯದಲ್ಲಿ ಪ್ರತಿಷ್ಠೆಯನ್ನು ಹೊಂದಿದೆ” ಎಂದರು. ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಬಿಜೆಪಿಯೊಂದಿಗೆ ಶಿವಸೇನಾ ನಿಲುವು ಗೊಂದಲ ಸೃಷ್ಟಿಸಬಹುದು ಎನ್ನಲಾಗುತ್ತದೆ. ಇನ್ನು ಈ ವಿಚಾರವಾಗಿ ಮಾಧ್ಯಮದವರು ಆದಿತ್ಯ ಠಾಕ್ರೆ ಅವರನ್ನು ಕೇಳಿದ್ದಕ್ಕೆ “ಇಂದು ಈ ಬಗ್ಗೆ ಮಾತನಾಡಲು ನಾನು ಬಯಸುವುದಿಲ್ಲ, ನಾವು ಇದನ್ನು ನಂತರ ಚರ್ಚಿಸುತ್ತೇವೆ” ಎಂದು ಗುರುವಾರ ತನ್ನ ಹುಟ್ಟುಹಬ್ಬದಂದು ಮುಂಬೈಯಲ್ಲಿ ಆಯೋಜಿಸಿದ ಸಂವಾದದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *