ಪ್ರಧಾನಿ ಮೋದಿ 5 ವರ್ಷಗಳ ವಿದೇಶ ಪ್ರವಾಸಕ್ಕೆ ಮಾಡಿದ ಖರ್ಚು ಎಷ್ಟು ಕೋಟಿ ಗೊತ್ತೇ?
ನ್ಯೂಸ್ ಕನ್ನಡ ವರದಿ: ಕೊರೋನ ಮಹಾಮಾರಿ ಪ್ರಪಂಚದಾದ್ಯಂತ ಪಸರಿಸುವ ಮೊದಲು ಪ್ರಧಾನಿ ನರೇಂದ್ರ ಮೋದಿ ವಿಶ್ವದಾದ್ಯಂತ ಪ್ರವಾಸ ಮಾಡಿದ್ದರ ಬಗ್ಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಖರ್ಚು ವೆಚ್ಚಗಳ ಕುರಿತು ಕೇಳಲಾದ ಪ್ರಶ್ನೆಗೆ ಕೇಂದ್ರದ ರಾಜ್ಯ ವಿದೇಶಾಂಗ ವ್ಯವಹಾರಗಳ ಸಚಿವ ವಿ.ಮುರುಳೀಧರನ್ ಅವರು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

2015ರಿಂದ ಪ್ರಧಾನಿ ನರೇಂದ್ರ ಮೋದಿಯವರು 58 ದೇಶಗಳಿಗೆ ಭೇಟಿ ನೀಡಿದ್ದು, ಒಟ್ಟು 517.82 ಕೋಟಿ ರೂ. ವೆಚ್ಚವಾಗಿದೆ ಎಂದು ಮಾಹಿತಿ ರಾಜ್ಯಸಭೆಗೆ ನೀಡಿದ್ದಾರೆ. ಯಾವ ದೇಶದ ಪ್ರವಾಸ ಮಾಡಿದ್ದಾರೆ ಮತ್ತು ಪ್ರತೀ ಪ್ರವಾಸಕ್ಕೆ ಎಷ್ಟು ಖರ್ಚಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.