ಸಿಸಿಬಿ ನೋಟಿಸ್ ಸುದ್ದಿ: ನಿರೂಪಕಿ ಅನುಶ್ರೀ ನೀಡಿದ ಸ್ಪಷ್ಟನೆ ಏನು ಗೊತ್ತೇ?
ನ್ಯೂಸ್ ಕನ್ನಡ ವರದಿ: ‘ನನಗೆ ಯಾವುದೇ ನೋಟಿಸ್ ಬಂದಿಲ್ಲ. ಯಾವ ನೋಟಿಸ್ ಎಂಬುವುದು ನನಗೆ ಗೊತ್ತಾಗುತ್ತಿಲ್ಲ. ನೀವು ಹೇಳುತ್ತಿರುವ ರೀತಿಯಲ್ಲಿ ಯಾವುದೇ ನೋಟಿಸ್ ತಲುಪಿಲ್ಲ. ನನ್ನ ಮೊಬೈಲಿಗೆ ಸಮನ್ಸ್ ಸಹ ಬಂದಿಲ್ಲ. ಮಂಗಳೂರಿನ ಮನೆಯಲ್ಲಿಯೂ ನಾವು ಯಾರು ಇಲ್ಲ. ಸುದ್ದಿ ಬಿತ್ತರವಾಗುತ್ತಿದ್ದಂತೆ ನಾನು ಮಂಗಳೂರಿನ ಮನೆಯ ಬಳಿ ಕೆಲವರನ್ನ ಕಳಿಸಿ ವಿಚಾರಿಸಿದೆ. ನಾನು, ಅಮ್ಮ ಮತ್ತು ತಮ್ಮ ಬೆಂಗಳೂರಿನಲ್ಲಿಯೇ ಇದ್ದೇನೆ’ ಎಂದು ಅನುಶ್ರೀ ಸಿಸಿಬಿ ನೋಟಿಸ್ ವರದಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಿನಿಮಾ ಇಂಡಸ್ಟ್ರಿಗೆ ಬಂದು 14 ವರ್ಷ ಆಗಿದೆ. 12 ವರ್ಷದ ಹಿಂದೆ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ನಮಗೆ ಕಿಶೋರ್ ಶೆಟ್ಟಿ ಮತ್ತು ತರುಣ್ ಕೊರಿಯೋಗ್ರಾಫರ್ ಆಗಿದ್ದರು. ಅದಾದ ಬಳಿಕ ಇಬ್ಬರ ಜೊತೆಗೆ ಸಂಪರ್ಕ ಬಂದಿಲ್ಲ. ಮೂರು ವರ್ಷದ ಹಿಂದೆ ಬಂಧಿತರ ಡ್ಯಾನ್ಸ್ ಸ್ಕೂಲ್ಖ ಉದ್ಘಾಟನೆ ಮಾಡಿಕೊಟ್ಟಿದ್ದೇನೆ. ಲಾಕ್ಡೌನ್ ವೇಳೆ ಇಪ್ಪತ್ತೈದು ಮಂಗಳೂರಿನಲ್ಲಿ ಲಾಕ್ ಆಗಿದ್ದೆ. ನಂತರ ಅನುಮತಿ ಪಡೆದು ಕಾರ್ ಡ್ರೈವ ಮಾಡಿಕೊಂಡು ಬಂದಿದ್ದೇನೆ. ಮಂಗಳೂರಿಗೆ ಹೋದ್ರು ಮನೆ ಮತ್ತು ದೇವಸ್ಥಾನಕ್ಕೆ ಮಾತ್ರ ಹೋಗುತ್ತೇನೆ. ಲಾಕ್ಡೌನ್ ನಲ್ಲಿಯೂ ನಾನು ಮನೆಯಲ್ಲಿದ್ದೇನೆ. ಈ ಬಗ್ಗೆ ನೀವು ಯಾರನ್ನಾದರೂ ಕೇಳಿ ಎಂದು ಹೇಳಿದರು.
ಒಂದು ವೇಳೆ ವಿಚಾರಣೆಗೆ ಹಾಜರಾಗಬೇಕೆಂದು ಅಂದಾಗ ಖಂಡಿತ ಹೋಗುತ್ತೇನೆ. ಪೊಲೀಸರ ತನಿಖೆಗೆ ಸಹಕರಿಸೋದು ನನ್ನ ಕರ್ತವ್ಯ ಆಗಿರುತ್ತದೆ. ತಾಯಿ ಮತ್ತು ತಮ್ಮ ಮನೆಯಲ್ಲಿ ಟಿವಿ ನೋಡುತ್ತಿದ್ದಾರೆ. ಮಗಳ ಮೇಲೆ ಅವರಿಗೆ ನಂಬಿಕೆ ಇಲ್ಲ ಅಂತ ಅಲ್ಲ. ಜನ ಹೇಗೆ ನೋಡುತ್ತಾರೆ ಅನ್ನೋ ಚಿಂತೆ ಅವರ ಮುಖದಲ್ಲಿ ಕಾಣಿಸುತ್ತಿದೆ. ಕಾರ್ಯಕ್ರಮಗಳಿಗೆ ಹೋಗುವುದು ನನ್ನ ಕೆಲಸ. ಆದ್ರೆ ಎಷ್ಟೋ ಜನರನ್ನು ಭೇಟಿ ಆಗುತ್ತಿರುತ್ತೇವೆ. ಅಲ್ಲಿ ಬಂದರೋರು ನಮಗೆ ಪರಿಚಯ ಇರಬೇಕು ಅಂತೇನಿಲ್ಲ ಎಂದು ತಿಳಿಸಿದರು.