ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದ ಸರಕಾರ; ಮಾರ್ಚ್ ತಿಂಗಳ ವೇತನಕ್ಕೆ ತಡೆ

ಬೆಂಗಳೂರು: ಸಾರಿಗೆ ನೌಕರರಿಗೆ ಸರ್ಕಾರ ಬಿಗ್ ಶಾಕಿಂಗ್ ನ್ಯೂಸ್ ಒಂದು ನೀಡಿದೆ. ಮುಷ್ಕರಕ್ಕೆ ಮುಂದಾದ ನೌಕರರಿಗೆ ಸರ್ಕಾರ ಹಾಗೂ ಸಂಸ್ಥೆಯಿಂದ ಈ ನ್ಯೂಸ್ ಹೊರ ಬಿದ್ದಿದೆ.

ಮಾರ್ಚ್ ತಿಂಗಳ ವೇತನವನ್ನು ಸರ್ಕಾರ ತಡೆಹಿಡಿದಿದೆ. ಅಲ್ಲದೆ ಸಾರಿಗೆ ನಿಗಮಗಳಿಗೆ ಸರ್ಕಾರ ಸೂಚನೆ ನೀಡಿದೆ. ಮುಷ್ಕರ ಕೈ ಬಿಡುವಂತೆ ಪರಿಪರಿಯಾಗಿ ಮನವಿ ಮಾಡಿದರೂ ನೌಕರರು ಡೋಂಟ್ ಕೇರ್ ಎನ್ನುತ್ತಿದ್ದು, ಹೀಗಾಗಿ ಮಾರ್ಚ್ ತಿಂಗಳ ಸಂಬಳ ತಡೆಹಿಡಿಯಲು ಸಾರಿಗೆ ನಿಗಮಗಳು ಮುಂದಾಗಿವೆ.

ತಿಂಗಳ 10 ನೇ ತಾರೀಕು ಒಳಗೆ ನಿಗಮಗಳು ವೇತನ ನೀಡುತ್ತಿದ್ದವು. ಆದರೆ ಈ ಬಾರಿ ಮುಷ್ಕರ ಕೈಬಿಡುವವರೆಗೆ ಸಂಬಳ ಇಲ್ಲ. ಈ ಮೂಲಕ ಸಾರಿಗೆ ನಿಗಮದ ನೌಕರರಿಗೆ ಮಾರ್ಚ್ ತಿಂಗಳ ವೇತನ ತಡೆಗೆ ನಿರ್ಧಾರ ಮಾಡಲಾಗಿದೆ ಎಂದು ಬಿಎಂಟಿಸಿ, ಭದ್ರತಾ ವಿಭಾಗದ ನಿರ್ದೇಶಕ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.

ಡ್ರೈವರ್ ಹಾಗೂ ಕಂಡೆಕ್ಟರ್ ಗಳ ಸಂಬಳವನ್ನು ತಡೆಹಿಡಿಯಲಾಗಿದೆ. ಉಳಿದ ವಿಭಾಗಗಳ ಸಂಬಳವಾಗಿದೆ. ಆದಾಯದ ಆಧಾರದ ಮೇಲೆ ಸಂಬಳ ಕೊಡಲಾಗುವುದು. ಸದ್ಯಕ್ಕೆ ಮುಷ್ಕರ ನಿರತ ಸಿಬ್ಬಂದಿಗೆ ಮಾರ್ಚ್ ತಿಂಗಳ ಸಂಬಳವಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *