ಕರ್ನಾಟಕ ವಿಧಾನಸಭೆ ಚುನಾವಣೆ: ಇಂದು ಬಿಡುಗಡೆಯಾಗಲಿದೆ 223 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ?

ನ್ಯೂಸ್ ಕನ್ನಡ ವರದಿ(15-04-2018): ಕರ್ನಾಟಕ ವಿಧಾನ ಸಭಾ ಚುನಾವಣೆಯ 223 ಅಭ್ಯರ್ಥಿಗಳ ಒಂದೇ ಪಟ್ಟಿ ಇಂದು ಮದ್ಯಾಹ್ನದ ವೇಳೆಗೆ ಬಿಡುಗಡೆಯಾಗುವ ಸಾಧ್ಯತೆಗಳಿದೆಯೆಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಕಳೆದ ಒಂದು ವಾರದಿಂದ ಈ ಕುರಿತು ದೆಹಲಿಯಲ್ಲಿ ಚರ್ಚೆ ನಡೆಸುತ್ತಿರುವ ಪಕ್ಷದ ಚುನಾವಣಾ ಸಮಿತಿಯು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಗೊಳಿಸಿದ್ದು 223 ಅಭ್ಯರ್ಥಿಗಳ ಪಟ್ಟಿಯನ್ನು ಒಂದೇ ಬಾರಿಗೆ ಇಂದು ಸಂಜೆ ವೇಳೆಗೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆಯೆಂದು ಹೇಳಲಾಗುತ್ತಿದೆ.

ಎಐಸಿಸಿ ಕಚೇರಿಯಲ್ಲಿ ಇಂದು ಸಂಜೆ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ಸಿಎಂ ಸಿದ್ದರಾಮಯ್ಯ,ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *